ರಾಜ್ಯ ಕಾಂಗ್ರೆಸ್‍ನಿಂದ ಬಿಜೆಪಿಗೆ ಪ್ರವಾಹ ವರದಿ..!

ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಸಂಬಂಧ ಕಾಂಗ್ರೆಸ್ ಇವತ್ತು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದರು. ಅದರ ಆಧಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಹೆಚ್.ಕೆ ಪಾಟೀಲ್ ಸೇರಿ ಈ ವರದಿ ಸಿದ್ಧಪಡಿಸಿದ್ದಾರೆ. ಇಂದು ಸಿಎಂ ಯಡಿಯೂರಪ್ಪರಿಗೆ ಈ ವರದಿಯನ್ನು ಸಲ್ಲಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ಲಾನ್ ಮಾಡಿದ್ದಾರೆ. ಕೇಂದ್ರದಿಂದ ಪರಿಹಾರ ಬಂದಿಲ್ಲ ಎಂದು ಟೀಕಿಸುತ್ತಲೇ ಇರುವ ಕಾಂಗ್ರೆಸ್ ನೀಡುತ್ತಿರುವ ಈ ವರದಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

Contact Us for Advertisement

Leave a Reply