ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿಕೆ

ಅನರ್ಹ ಶಾಸಕರು ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‍ನಲ್ಲಿ ನಡೆದಿದ್ದು, ಸದ್ಯ ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. ಅನರ್ಹ ಶಾಸಕರ ಪರ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದಾರೆ. ಶಾಸಕರ ರಾಜೀನಾಮೆ ಬಾಕಿ ಉಳಿಸಿಕೊಂಡು ನಂತರ ಅನರ್ಹಗೊಳಿಸಲಾಗಿದೆ. ಈ ಮೂಲಕ ಸ್ಪೀಕರ್ ತಾರತಮ್ಯ ತೋರಿದ್ದಾರೆ. ರಾಜೀನಾಮೆ ಸಲ್ಲಿಕೆ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದರೂ ಅನರ್ಹಗೊಳಿಸಿದ್ದಾರೆ. ಚುನಾವಣಾ ಆಯೋಗ ಅನರ್ಹ ಶಾಸಕರು ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. ಆದ್ರೆ ಅನರ್ಹರು ಎಂಬ ಹಣೆಪಟ್ಟಿ ಹೊತ್ತು ಚುನಾವಣೆಗೆ ಹೋಗಲು ನಮ್ಮ ಕಕ್ಷಿದಾರರಿಗೆ ಇಷ್ಟವಿಲ್ಲ. ಹೀಗಾಗಿ ಅನರ್ಹತೆಗೇ ತಡೆ ನೀಡಿ ಎಂದು ಮನವಿ ಮಾಡಿದ್ರು.

ಇಂದು ಕೇವಲ ಅನರ್ಹ ಶಾಸಕರ ಪರ ವಾರವನ್ನು ಮಾತ್ರವೇ ಕೇಳೋದಾಗಿ ಸುಪ್ರೀಂಕೋರ್ಟ್ ಹೇಳಿದೆ. ನಾಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಪರ ವಕೀಲರು ವಾದ ಮಂಡಿಸಲಿದ್ದಾರೆ.

Contact Us for Advertisement

Leave a Reply