ರಾಹುಲ್‌ ರಾವಣ ಪೋಸ್ಟರ್‌: ಬಿಜೆಪಿ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಕಾಂಗ್ರೆಸ್‌

masthmagaa.com:

ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವಿನ ಪೋಸ್ಟರ್‌ ವಾರ್‌ ಈಗ ಕೋರ್ಟ್‌ ಮೆಟ್ಟಿಲೇರಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನ ರಾವಣನಿಗೆ ಹೋಲಿಸಿ ಬಿಜೆಪಿ ಹಾಕಿದ್ದ ಪೋಸ್ಟರ್‌ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ ನಾಯಕರೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಕೇಸ್‌ ದಾಖಲಿಸಬೇಕು ಅಂತ ರಾಜಸ್ಥಾನ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಜಸ್ವಂತ್ ಗುರ್ಜರ್, ಜೈಪುರ ಮೆಟ್ರೋಪಾಲಿಟನ್ ಕೋರ್ಟ್-11 ರಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ. ಅತ್ತ ರಾಹುಲ್‌ರ ರಾವಣ ಪೋಸ್ಟರ್‌ನ್ನ ವಿರೋಧಿಸಿ ಕೇರಳದಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

-masthmagaa.com

Contact Us for Advertisement

Leave a Reply