ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರ ಬಂಧನ

ಉತ್ತರ ಪ್ರದೇಶದಲ್ಲಿ ಚಿನ್ಮಯಾನಂದ ಸ್ವಾಮೀಜಿ ಕೇಸ್‍ನಲ್ಲಿ ಅರೆಸ್ಟ್ ಆಗಿರೋ ಕಾನೂನು ಕಾಲೇಜು ವಿದ್ಯಾರ್ಥಿನಿ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್ ರೋಡಿಗಿಳಿದಿದೆ. ಶಹಜಹಾನ್‍ಪುರದಿಂದ ಲಕ್ನೋಗೆ ಮೆರವಣಿಗೆ ನಡೆಸಲು ಕಾಂಗ್ರೆಸ್ ಅನುಮತಿ ಕೋರಿತ್ತು. ಆದ್ರೆ ಸ್ಥಳೀಯ ಆಡಳಿತ ಅವರಿಗೆ ಅನುಮತಿ ನೀಡಿರಲಿಲ್ಲ. ಆದರೂ ಪ್ರತಿಭಟನಾ ರ್ಯಾಲಿಗೆ ಮುಂದಾದ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ ಅವರನ್ನು ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದಾರೆ. ಅಲ್ಲದೆ ಇನ್ನೂ ಹಲವು ನಾಯಕರನ್ನು ಪ್ರತಿಭಟನಾ ರ್ಯಾಲಿಯಿಂದ ಹೊತ್ತೊಯ್ದು ಬಂಧನದಲ್ಲಿ ಇಡಲಾಗಿದೆ. ಸುಲಿಗೆ ಮಾಡಿದ ಆರೋಪದಲ್ಲಿ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

Contact Us for Advertisement

Leave a Reply