ಮಧ್ಯ ಪ್ರದೇಶ ಚುನಾವಣೆಗೆ ಕಾಂಗ್ರೆಸ್‌ ಪ್ರಣಾಳಿಕೆ: ರಾಜ್ಯದ ಎಲ್ಲಾ ನಾಗರಿಕರಿಗೆ 25 ಲಕ್ಷ ರೂ ಆರೋಗ್ಯ ವಿಮೆ

masthmagaa.com:

ಮುಂಬಲಿರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ನಾಗರಿಕರಿಗೆ 25 ಲಕ್ಷ ರೂ ಆರೋಗ್ಯ ವಿಮೆ, ಒಬಿಸಿಗಳಿಗೆ ಶೇ. 27 ಮೀಸಲಾತಿ ಮತ್ತು ಐಪಿಎಲ್ ತಂಡವನ್ನ ರಚಿಸುವುದು ಸೇರಿದಂತೆ ಹಲವಾರು ಭರವಸೆಗಳನ್ನ ಕಾಂಗ್ರೆಸ್‌ ನಾಯಕರು ನೀಡಿದ್ದಾರೆ. ಕಾಂಗ್ರೆಸ್ ತನ್ನ 106 ಪುಟಗಳ ಪ್ರಣಾಳಿಕೆಯಲ್ಲಿ 59 ಭರವಸೆಗಳನ್ನ ಪಟ್ಟಿ ಮಾಡಿದ್ದು, ರೈತರು, ಮಹಿಳೆಯರು ಮತ್ತು ಸರ್ಕಾರಿ ನೌಕರರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳಿಗೆ ಹಲವು ಭರವಸೆಗಳನ್ನ ನೀಡಿದೆ. ಅಂದ್ಹಾಗೆ ಮಧ್ಯ ಪ್ರದೇಶದಲ್ಲಿ ನವೆಂಬರ್ 17ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರಬರಲಿದೆ.

-masthmagaa.com

Contact Us for Advertisement

Leave a Reply