ಪ್ರತ್ಯೇಕ ಜಿಲ್ಲೆ ವಿಚಾರ..ವಿಶ್ವನಾಥ್​​ಗೆ ಕಾಂಗ್ರೆಸ್ ಟಾಂಗ್​..!

ಹುಣಸೂರು ಮತ್ತು ವಿಜಯನಗರ ಪ್ರತ್ಯೇಕ ಜಿಲ್ಲೆ ಒತ್ತಾಯಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.  ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್​, ಹುಣಸೂರು ಮತ್ತು ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಬೇಕು ಎನ್ನುವಂತಹ ವಿಚಾರಗಳನ್ನು ಸ್ವಾರ್ಥ ರಾಜಕಾರಣಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಜಿಲ್ಲೆಯ ಮುಖಂಡರು ಈ ಬಗ್ಗೆ ಸ್ಥಳೀಯರ ಜೊತೆ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಬೇಕು. ಬಳಿಕ ಅಗತ್ಯತೆ ಇದ್ದಲ್ಲಿ ಒಮ್ಮತದಲ್ಲಿ ವ್ಯವಸ್ಥಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದಿದೆ. ಹೆಚ್. ವಿಶ್ವನಾಥ್ ಅವರ ಇಷ್ಟು ವರ್ಷದ ರಾಜಕಾರಣದಲ್ಲಿ ಹುಣಸೂರು ಜಿಲ್ಲೆ ಆಗಬೇಕು ಎನ್ನುವ ವಿಷಯವನ್ನು ಎಷ್ಟು ಬಾರಿ ಪ್ರಸ್ತಾಪಿಸಿದ್ದಾರೆ..? ಈಗ ಡಿಸೆಂಬರ್ 5 ರಂದು ಉಪಚುನಾವಣೆ ಬಂದಿರುವ ಕಾರಣಕ್ಕೆ ಇಂತಹ ಗಿಮಿಕ್ ಮಾಡಿದ್ರೆ ಅದನ್ನು ಜನ ಒಪ್ತಾರಾ..? ಇಂತಹ ರಾಜಕೀಯ ಪ್ರೇರಿತ ಅಭಿಪ್ರಾಯವನ್ನು ಮತದಾರರು ತಿರಸ್ಕರಿಸಲಿದ್ದಾರೆ ಎಂದು ಕಿಡಿಕಾರಿದೆ.

ಇನ್ನು ಕೆಪಿಸಿಸಿ ಉಸ್ತುವಾರಿ ವೇಣುಗೋಪಾಲ್ ಇವತ್ತು ಬೆಂಗಳೂರಿಗೆ ಬರುತ್ತಿದ್ದು, ಉಪಚುನಾವಣೆ ಸಂಬಂಧ ಕೆಲ ವಿಚಾರಗಳನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹೇಗೆ ಮಾಡಬೇಕು, ಉಪ ಚುನಾವಣೆ ತಯಾರಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ ಎಂದು ಟ್ವೀಟ್ ಮಾಡಿದೆ.

Contact Us for Advertisement

Leave a Reply