ಯಾರಾಗ್ತಾರೆ ವಿಪಕ್ಷ ನಾಯಕ..? ಕೊನೆಗೂ ಎಚ್ಚೆತ್ತ `ಕೈ’ಕಮಾಂಡ್..!

ಸರ್ಕಾರ ರಚನೆಯಾಗಿ 3 ತಿಂಗಳಾಗುತ್ತಾ ಬಂದರೂ ಇನ್ನೂ ಪ್ರತಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಮತ್ತು ಮೂಲ ಕಾಂಗ್ರೆಸ್ಸಿಗರ ನಡುವೆ ಪ್ರತಿಪಕ್ಷ ನಾಯಕನ ಸ್ಥಾನಕ್ಕಾಗಿ ಹಗ್ಗಜಗ್ಗಾಟ ಮುಂದುವರಿದಿದೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಸಭೆ ನಡೆಸುತ್ತಿದ್ದಾರೆ. ಸುಮಾರು 60 ಮಂದಿ ನಾಯಕರನ್ನು ಸಭೆಗೆ ಆಹ್ವಾನಿಸಿದ್ದು, ಚರ್ಚೆ ನಡೆಸುತ್ತಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಪ್ರತಿಯೊಬ್ಬರ ಬಳಿಯೂ ಪ್ರತ್ಯೇಕವಾಗಿ ಮಾತುಕತೆ ನಡೆಸಿ, ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರೋ ಈ ಸಭೆಯಲ್ಲಿ ಹಲವಾರು ರಾಜ್ಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇನ್ನು ಅಕ್ಟೋಬರ್ 10ರಿಂದ 3 ದಿನ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಪಕ್ಷಪಕ್ಷ ನಾಯಕನಿಲ್ಲದೇ ಕಲಾಪ ಸಾಗಲಿದೆ ಅನ್ನೋ ಮಾತು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಕಾಂಗ್ರೆಸ್ ಹೈಕಮಾಂಡ್ ವಿಪಕ್ಷ ನಾಯಕನ ಆಯ್ಕೆಗೆ ಮುಂದಾಗಿದೆ.

Contact Us for Advertisement

Leave a Reply