ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‍ಗೆ ಕಾದಿದ್ಯಾ ಶಾಕ್..?

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಶಾಸಕಿಯೊಬ್ಬರು ಪ್ರಿಯಾಂಕಾ ಗಾಂಧಿಯ ಮೆರವಣಿಗೆ ಬಿಟ್ಟು ವಿಧಾನಸಭೆ ವಿಶೇಷ ಅಧಿವೇಶನಕ್ಕೆ ಹಾಜರಾಗಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಭಾಗಿಯಾಗಲು ಲಕ್ನೋಗೆ ಆಗಮಿಸಿದ್ದರು. ಆದ್ರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸ್ಪರ್ಧಿಸೋ ರಾಯಬರೇಲಿ ಕ್ಷೇತ್ರದ ಶಾಸಕಿ ಆದಿತಿ ಸಿಂಗ್ ಮಾತ್ರ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ವಿಶೇಷ ಅಧಿವೇಶನಕ್ಕೆ ಹಾಜರಾಗಿದ್ದರು. ಈ ಮೂಲಕ ಸದ್ಯದಲ್ಲೇ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರೋ ಸುಳಿವು ಕೊಟ್ಟಿದ್ದಾರೆ. ಆದ್ರೆ ಇದೆಲ್ಲಾ ಸುಳ್ಳು ನಾನು ಬಿಜೆಪಿಗೆ ಹೋಗಲ್ಲ ಎಂದು ಆದಿತಿ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಆದಿತಿ ಸಿಂಗ್ ಅವರ ತಂದೆ ಅಖಿಲೇಶ್ ಸಿಂಗ್ ಪ್ರಭಾವಿಯಾಗಿದ್ದು, ಗಾಂಧಿ ಕುಟುಂಬಕ್ಕೆ ತುಂಬಾನೇ ಆಪ್ತರಾಗಿದ್ದಾರೆ.

Contact Us for Advertisement

Leave a Reply