ರಾಜ್ಯದಲ್ಲಿ ಮುಂದುವರೆದ ಮಳೆ! ಉಜೈನಿಯಲ್ಲಿ ಸಿಡಿಲಿನ ಹೊಡೆತಕ್ಕೆ ಮೂರು ಬಲಿ!

masthmagaa.com:

ರಾಜ್ಯದಲ್ಲಿ ವರ್ಷಧಾರೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹುರಳಿ ಕುಪ್ಪಿ ಅನ್ನೋ ಕಡೆ ಅತಿಹೆಚ್ಚು ಅಂದ್ರೆ 60 ಮಿಮೀ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆಯಾಗೋ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಭಾರತೀಯ ಹವಮಾನ ಇಲಾಖೆ ಎಲ್ಲೋ ಅಲರ್ಟ್‌ ಜಾರಿ ಮಾಡಿದೆ. ಆ ಕಡೆ ಪವಿತ್ರ ಕ್ಷೇತ್ರ ಉಜೈನಿಯಲ್ಲಿ ಸಿಡಿಲು ಬಡಿದು ಮೂರು ಜನರು ಸಾವನ್ನಪ್ಪಿದ್ದಾರೆ. ಸಿಡಿಲಿನ ಹೊಡೆತಕ್ಕೆ ದೇಗುಲದ ಅನೇಕ ಮೂರ್ತಿಗಳು ಡ್ಯಾಮೇಜ್‌ ಆಗಿವೆ.

-masthmagaa.com

Contact Us for Advertisement

Leave a Reply