ರಾಜ್ಯದಲ್ಲಿ ಮುಂದುವರೆದ ಮಳೆ! ಹಲವು ಕಡೆ ಎಲ್ಲೋ ಅಲರ್ಟ್!

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಎಂಬಲ್ಲಿ ಅತಿಹೆಚ್ಚು119 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾದ್ಯತೆ ಇದೆ. ಉತ್ತರ ಒಳನಾಡು ಕೆಲವೊಂದು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

 

 

 

– masthmagaa.com

 

Contact Us for Advertisement

Leave a Reply