ರಾಜ್ಯದಲ್ಲಿ ಮುಂದುವರೆದ ಮಳೆ..! ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಾಗನತಾಗಿ ಎಂಬಲ್ಲಿ ಅತಿಹೆಚ್ಚು 150 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಅಧಿಕ ಮಳೆಯಾಗುವ ಸಾದ್ಯತೆ ಇದೆ. ಜೊತೆಗೆ ದಕ್ಷಿಣ ಒಳನಾಡಿನ ಕೆಲವೊಂದು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply