ವಿಶ್ವದಲ್ಲಿ ಹೆಚ್ಚಿದ ಕೊರೋನಾ ಹಾವಳಿ..! ಭಾರತದಲ್ಲಿ 166 ಮಂದಿ ಸಾವು

masthmagaa.com:

ದೇಶದಲ್ಲಿ ಕೊರೋನಾ ವೈರಸ್ ಹಾವಳಿ ದಿನೇ ದಿನೇ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 17 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 166ಕ್ಕೆ ಏರಿಕೆಯಾಗಿದೆ. ಇನ್ನು ದೇಶದಾದ್ಯಂತ ಕೊರೋನಾ ಸೋಂಕು ತಗುಲಿದವರ ಸಂಖ್ಯೆ 5,734ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ 1,135 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 72 ಮಂದಿ ಸಾವನ್ನಪ್ಪಿದ್ದಾರೆ. 2ನೇ ಸ್ಥಾನದಲ್ಲಿ ತಮಿಳುನಾಡು ಇದ್ದು, ಇಲ್ಲಿ 738 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಇನ್ನು ಕರ್ನಾಟಕ 181 ಮಂದಿ ಸೋಂಕಿತರೊಂದಿಗೆ 10ನೇ ಸ್ಥಾನದಲ್ಲಿದೆ.

ಇನ್ನು ವಿಶ್ವದ ವಿಚಾರಕ್ಕೆ ಬಂದ್ರೆ ಒಟ್ಟು 15 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಇವರಲ್ಲಿ 89 ಸಾವಿರ ಮಂದಿ ಜೀವ ಬಿಟ್ಟಿದ್ದಾರೆ.

-masthmagaa.com

Contact Us for Advertisement

Leave a Reply