masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 41,806 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 581 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 09 ಲಕ್ಷದ 87 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,11,989 ಆಗಿದೆ.

ಕಳೆದ 24 ಗಂಟೆಗಳಲ್ಲಿ 39,130 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 01 ಸಾವಿರದ 850 ಆಗಿದೆ. ದೇಶದಲ್ಲಿ ಇನ್ನೂ ಕೂಡ 4 ಲಕ್ಷದ 32 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 97.28 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 19.43 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 43.80 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 34.97 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 39.13 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply