ದೇಶದಲ್ಲಿ ಕೊರೋನಾ ರಣಕೇಕೆ.. 24 ಗಂಟೆಗಳಲ್ಲಿ 50 ಬಲಿ..!

masthmagaa.com:

ಮಾರಣಾಂತಿಕ ಕೊರೋನಾ ವೈರಸ್​ಗೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 50 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 640ಕ್ಕೆ ಏರಿಕೆಯಾಗಿದೆ.

ಇನ್ನು ಮಂಗಳವಾರ ಬೆಳಗ್ಗೆಯಿಂದ ಬುಧವಾರ ಬೆಳಗ್ಗೆವರೆಗೆ ಹೊಸದಾಗಿ 1,383 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 19,984ಕ್ಕೆ ಏರಿಕೆಯಾಗಿದ್ದು, 20 ಸಾವಿರ ಸನಿಹದಲ್ಲಿದೆ.

ಇದುವರೆಗೆ 3,870 ಮಂದಿ ಗುಣಮುಖರಾಗಿ ಅಥವಾ ಡಿಸ್ಚಾರ್ಜ್ ಆಗಿ ಮನೆಗೆ ವಾಪಸ್ ಆಗಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಗುಣಮುಖರಾದವರ ಪ್ರಮಾಣ ಶೇ. 19ರಷ್ಟಿದೆ.

ರಾಜ್ಯವಾರು ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರೋ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 5 ಸಾವಿರ ಗಡಿ ದಾಟಿದೆ. ಜೊತೆಗೆ 251 ಮಂದಿ ಮೃತಪಟ್ಟಿದ್ದಾರೆ. ನಂತರದ ಸ್ಥಾನದಲ್ಲಿ ಗುಜರಾತ್, ದೆಹಲಿ, ರಾಜಸ್ಥಾನ, ತಮಿಳುನಾಡು ಹಾಗೂ ಮಧ್ಯಪ್ರದೇಶ ಇದೆ. ಸೋಂಕಿತರ ಪಟ್ಟಿಯಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply