masthmagaa.com:

ದೆಹಲಿ: ವಿಶ್ವದ ಎಲ್ಲಾ ರಾಷ್ಟ್ರಗಳಿಗಿಂತ ಭಾರತದಲ್ಲಿ ಕೊರೋನಾ ವೇಗವಾಗಿ ಮುನ್ನುಗ್ಗುತ್ತಿದ್ದು, ಕಳೆದ 24 ಗಂಟೆಯಲ್ಲಿ 76,472 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 34,63,972ಕ್ಕೆ ತಲುಪಿದೆ. ಜೊತೆಗೆ ಸತತ 4 ದಿನಗಳಿಂದ ಭಾರತದಲ್ಲಿ ಪ್ರತಿದಿನ ಸಾವಿರಕ್ಕೂ ಅಧಿಕ ಜನ ಸಾವನ್ನಪ್ಪುತ್ತಿದ್ದು, 24 ಗಂಟೆಯಲ್ಲಿ 1,021 ಮಂದಿ ಪ್ರಾಣ ಬಿಟ್ಟಿದ್ದಾರೆ. ಒಟ್ಟು ಮೃತರ ಸಂಖ್ಯೆ 62,550ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ 65,050  ಮಂದಿ ಗುಣಮುಖರಾಗಿದ್ದು, ಒಟ್ಟು 26,48,998 ಸೋಂಕಿತರು ಗುಣಮುಖರಾದಂತಾಗಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ ಕೂಡ  7,52,424 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ಧಾರೆ.

-masthmagaa.com

Contact Us for Advertisement

Leave a Reply