masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 46,148 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 979 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 02 ಲಕ್ಷದ 79 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 3,96,730 ಆಗಿದೆ.

ಕಳೆದ 24 ಗಂಟೆಗಳಲ್ಲಿ 58,578 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 93 ಲಕ್ಷದ 09 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 5 ಲಕ್ಷದ 72 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.80 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.31 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 15.70 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 40.63 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 17.21 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 32.36 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply