masthmagaa.com:

ಭಾರತದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿ 24 ಗಂಟೆಗಳಲ್ಲಿ 86,432 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಪೀಡಿತರ ಸಂಖ್ಯೆ 40 ಲಕ್ಷದ ಗಡಿ ದಾಟಿದ್ದು, 40,91,801ಕ್ಕೆ ತಲುಪಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 1,089 ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 69,561ಕ್ಕೆ ಏರಿಕೆಯಾಗಿದೆ. ಅದೇ ರೀತಿ ಕಳೆದ 24 ಗಂಟೆಗಳಲ್ಲಿ 70,072 ಮಂದಿ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 31,07,223ಕ್ಕೆ ಏರಿಕೆಯಾಗಿದೆ. ಇನ್ನು ಕೂಡ ದೇಶದ ವಿವಿಧ ಆಸ್ಪತ್ರೆಗಳಲ್ಲಿ 69,561 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ಗುಣಮುಖ ಪ್ರಮಾಣ ಶೇ. 77.23ರಷ್ಟಿದ್ದು, ಸಾವಿನ ಪ್ರಮಾಣ ಶೇ.1.73ರಷ್ಟಿದೆ.

-masthmagaa.com

 

Contact Us for Advertisement

Leave a Reply