ಕೊರೋನಾ ವೈರಸ್: ದುಬೈನಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಪೊಲೀಸರ ಹುಡುಕಾಟ

masthmagaa.com:

ಮಂಗಳೂರು: ದುಬೈನಿಂದ ಬಂದ ಮಂಗಳೂರು ಮೂಲದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಪತ್ತೆಯಾಗಿತ್ತು. ಆದ್ರೆ ಆಸ್ಪತ್ರೆಗೆ ತೆರಳಿ ಟೆಸ್ಟ್ ಮಾಡಿಸುವ ಬದಲು ವ್ಯಕ್ತಿ ಎಸ್ಕೇಪ್ ಆಗಿದ್ದಾರೆ. ಹೀಗಾಗಿ ಪೊಲೀಸರು ಈ ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ.

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಏರ್​ಪೋರ್ಟ್​​​ಗಳಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಿ ಚೆಕ್ ಮಾಡಲಾಗುತ್ತಿದೆ. ಅದರಂತೆ ದುಬೈನಿಂದ ಭಾನುವಾರ ಸಂಜೆ ಮರಳಿದ ವ್ಯಕ್ತಿಯಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಪತ್ತೆಯಾಗಿತ್ತು. ಹೀಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ನಡೆಸಿಕೊಳ್ಳುವಂತೆ ಸೂಚಿಸಲಾಗಿತ್ತು. ಆದ್ರೆ ವ್ಯಕ್ತಿ ವೆನ್​​ಲಾಕ್​ ಆಸ್ಪತ್ರೆಗೆ ಭೇಟಿ ನೀಡಲೇ ಇಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು ಆ ವ್ಯಕ್ತಿಯನ್ನು ಪತ್ತೆಹಚ್ಚಿ ಆಸ್ಪತ್ರೆಗೆ ದಾಖಲಿಸಲಾಗುತ್ತೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply