masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 6,990 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 190 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 45 ಲಕ್ಷದ 87 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,68,980 ಆಗಿದೆ.

ಕಳೆದ 24 ಗಂಟೆಗಳಲ್ಲಿ 10,116 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 40 ಲಕ್ಷದ 18 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 00 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 98.35 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.36 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 10.12 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 64.13 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 78.80 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 123.25 ಕೋಟಿಗು ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply