ಆಹಾರ ವಸ್ತುಗಳ ಖರೀದಿಗೂ ಹೊರಗೆ ಬರಬೇಡಿ: ಯಡಿಯೂರಪ್ಪ ಮನವಿ

-masthmagaa.com:

ದೆಹಲಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ನಿನ್ನೆ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಈ ಘೋಷಣೆ ಮಾಡಿದ್ದಾರೆ. ಅಗತ್ಯ ವಸ್ತುಗಳ ಅಂಗಡಿಗಳು ಎಂದಿನಂತೆ ಓಪನ್ ಇರಲಿವೆ ಅಂತಲೂ ಮಾಹಿತಿ ನೀಡಿದ್ದರು.  ಹೀಗಾಗಿ ಇಂದು ಜನರು ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಗ್ಗೆಯಿಂದಲೂ ಅಂಗಡಿಗಳ ಮುಂದೆ ಸಾಲು ಸಾಲಾಗಿ ನಿಂತಿದ್ದಾರೆ. ಬೆಂಗಳೂರು, ದೆಹಲಿ, ಪುಣೆ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಜನ ಮುಗಿಬಿದ್ದು, ಅಗತ್ಯ ವಸ್ತುಗಳನ್ನು ಖರೀದಿಸಿದ್ರು. ಆದ್ರೆ ಈ ವೇಳೆ ಅಂತರವನ್ನು ಕಾಯ್ದುಕೊಂಡಿದ್ದು ವಿಶೇಷವಾಗಿತ್ತು.

ಆದ್ರೆ ಸಿಎಂ ಯಡಿಯೂರಪ್ಪ ಮಾತ್ರ ಅಂಗಡಿಗಳಿಗೆ ಹೋಗಲೇಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆಹಾರ ಸಾಮಗ್ರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಕೊಳ್ಳುವುದನ್ನು ತಕ್ಷಣ ನಿಲ್ಲಿಸಲು ಕೋರುತ್ತೇನೆ. ತರಕಾರಿ, ಹಣ್ಣುಗಳು, ಪೆಟ್ರೋಲ್, ಔಷಧಿ, ಎಟಿಎಂ ಸೌಲಭ್ಯ ಸೇರಿದಂತೆ ಅಗತ್ಯವಾದ ಎಲ್ಲ ವಸ್ತುಗಳು ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಈ ಸಂಬಂಧ ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply