masthmagaa.com:
ದೆಹಲಿ: ದೇಶದಲ್ಲಿ ಕೊರೋನಾಗೆ ತುತ್ತಾಗುತ್ತಿರುವ ಮತ್ತು ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 62 ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದು, 1543 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸೋಂಕು ಪೀಡಿತರ ಸಂಖ್ಯೆ 29,435ಕ್ಕೆ ಏರಿಕೆಯಾಗಿದ್ದು, 934 ಮಂದಿ ಬಲಿಯಾಗಿದ್ದಾರೆ. ಈವರೆಗೆ 6,869 ಮಂದಿ ಗುಣಮುಖರಾಗಿದ್ರೆ, 21,632 ಮಂದಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ 8,590 ಮಂದಿ ಸೋಂಕಿತರು ಪತ್ತೆಯಾಗಿದ್ದು, ಮೊದಲ ಸ್ಥಾನದಲ್ಲಿದೆ. ಇಲ್ಲಿ ಈವರೆಗೆ 369 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2ನೇ ಸ್ಥಾನದಲ್ಲಿರೋ ಗುಜರಾತ್ನಲ್ಲಿ 3,548 ಮಂದಿಗೆ ಸೋಂಕು ತಗುಲಿದ್ದು, 162 ಮಂದಿ ಮೃತಪಟ್ಟಿದ್ದಾರೆ. ಇನ್ನು ದೆಹಲಿ 3,108 ಮಂದಿ ಸೋಂಕಿತರೊಂದಿಗೆ 3ನೇ ಸ್ಥಾನದಲ್ಲಿದ್ದು, 54 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಕರ್ನಾಟಕದಲ್ಲಿ ಈವರೆಗೆ 512 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದೆ.
-masthmagaa.com
Contact Us for Advertisement