ಕಲಬುರಗಿಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಲ್ಲಿ ಕೊರೋನಾ ಲಕ್ಷಣ..!

masthmagaa.com:

ದೇಶದಲ್ಲಿ ಕೊರೋನಾ ವೈರಸ್​ಗೆ ಕಲಬುರಗಿಯ ವೃದ್ಧರೊಬ್ಬರು ಮೃತಪಟ್ಟ ಬೆನ್ನಲ್ಲೇ, ಅವರ ಕುಟುಂಬದ 4 ಸದಸ್ಯರಲ್ಲಿ ಕೊರೋನಾ ವೈರಸ್​ನ ಲಕ್ಷಣಗಳು ಕಂಡುಬಂದಿವೆ ಅಂತ ಕಲಬುರಗಿ ಜಿಲ್ಲಾಧಿಕಾರಿ ಹೇಳಿದ್ದಾರೆ. ಕುಟುಂಬ ಸದಸ್ಯರಲ್ಲಿ ನೆಗಡಿ, ಕೆಮ್ಮು, ಜ್ವರ ಕಂಡು ಬಂದಿದೆ. ನಾಲ್ವರಿಂದಲೂ ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಶುಕ್ರವಾರ ಸಂಜೆ ವೇಳೆಗೆ ಅದರ ವರದಿ ಬರಲಿದೆ ಅಂತ ಹೇಳಿದ್ದಾರೆ.

ಇನ್ನು ಮೃತ ವ್ಯಕ್ತಿಯ ಕುಟುಂಬಸ್ಥರ ಸಂಪರ್ಕಕಕ್ಕೆ ಯಾರು ಯಾರು ಬಂದಿದ್ದಾರೆ ಅನ್ನೋದನ್ನು ಪತ್ತೆ ಹಚ್ಚುವ ಕೆಲಸ ನಡೀತಿದೆ. ಅಗತ್ಯಬಿದ್ದರೆ ಅವರನ್ನೂ ಪರೀಕ್ಷೆಗೆ ಒಳಪಡಿಸುತ್ತೇವೆ ಎಂದಿದ್ದಾರೆ. ಸದ್ಯ ಮೃತ ವ್ಯಕ್ತಿಯ ಜೊತೆ ನಿರಂತರ ಸಂಪರ್ಕ ಹೊಂದಿದ 31 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನುಳಿದ 15 ಜನ ಲೋ ರಿಸ್ಕ್ ಹೊಂದಿದ್ದಾರೆ ಅಂತ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply