ಬಿಹಾರ ಚುನಾವಣೆ ಬಗ್ಗೆ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು..!

masthmagaa.com:

ಕೊರೋನಾ ಬಿಕ್ಕಟ್ಟಿನಿಂದಾಗಿ ಬಿಹಾರ ವಿಧಾನಸಭೆ ಚುನಾವಣೆಯನ್ನು ನಿಲ್ಲಿಸಲು ಸಾಧ್ಯವಿಲ್ಲ ಅಂತ ಸುಪ್ರೀಂಕೋರ್ಟ್​ ಹೇಳಿದೆ. ಕೊರೋನಾ ಹಿನ್ನೆಲೆ ಬಿಹಾರ ಚುನಾವಣೆಯನ್ನ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂಬ ಅರ್ಜಿಯನ್ನ ತಿರಸ್ಕರಿಸಿದ ಕೋರ್ಟ್​ ಈ ರೀತಿ ಹೇಳಿದೆ.

‘ಕೊರೋನಾದಿಂದಾಗಿ ಚುನಾವಣೆಯನ್ನು ನಿಲ್ಲಿಸಲು ಮತ್ತು ಚುನಾವಣಾ ಆಯೋಗದ ಅಧಿಕಾರ ವ್ಯಾಪ್ತಿಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಆಯುಕ್ತರು ಏನು ಮಾಡಬೇಕು ಅಂತ ಕೋರ್ಟ್​ ಹೇಳಲು ಆಗಲ್ಲ. ಚುನಾವಣಾ ಆಯುಕ್ತರು ಎಲ್ಲಾ ವಿಚಾರಗಳ ಬಗ್ಗೆ ಗಮನಹರಿಸಿ ನಿರ್ಧಾರ ಕೈಗೊಳ್ತಾರೆ’ ಅಂತ ನ್ಯಾಯಾಲಯ ಹೇಳಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದೆ. ಸದ್ಯ ಜೆಡಿಯು, ಬಿಜೆಪಿ, ಎಲ್​ಜೆಪಿ ಪಕ್ಷಗಳನ್ನೊಳಗೊಂಡ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ. ಸಿಎಂ ಆಗಿರುವ ನಿತೀಶ್ ಕುಮಾರ್ ಮತ್ತೊಂದು ಅವಧಿಗೆ ಅಧಿಕಾರದಲ್ಲಿ ಮುಂದುವರಿಯಲು ಕಸರತ್ತು ನಡೆಸ್ತಿದ್ದಾರೆ.

-masthmagaa.com

Contact Us for Advertisement

Leave a Reply