ಬೆಂಗಳೂರಲ್ಲಿ ಅಬ್ಬರಿಸುತ್ತಾ ಕೊಹ್ಲಿ ಬಳಗ..?

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 3ನೇ ಹಾಗೂ ಅಂತಿಮ ಟಿ-20 ಪಂದ್ಯ ಇಂದು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆದ್ದು ಸರಣಿ ಕೈವಶ ಮಾಡಿಕೊಳ್ಳಲು ಕೊಹ್ಲಿ ಪಡೆ ಕಾತರದಲ್ಲಿದೆ. 3 ಪಂದ್ಯಗಳ ಟಿ-20 ಸರಣಿಯಲ್ಲಿ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. 2ನೇ ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿತ್ತು. ಈಗ 3ನೇ ಪಂದ್ಯದಲ್ಲಿ ಗೆದ್ದು ಸರಣಿ ಡ್ರಾ ಮಾಡಿಕೊಳ್ಳೋ ವಿಶ್ವಾಸದಲ್ಲಿ ದಕ್ಷಿಣ ಆಫ್ರಿಕಾ ತಂಡ ಮೈದಾನಕ್ಕೆ ಇಳಿಯಲಿದೆ. ಇನ್ನು ಭಾರತದ ಪರ ರಿಷಬ್ ಪಂಥ್ ಸತತ ವೈಫಲ್ಯದಿಂದ ಬಳಲುತ್ತಿದ್ದು, ಇದು ಕೊನೆಯ ಅವಕಾಶವಾಗುವ ಸಾಧ್ಯತೆ ಇದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

Contact Us for Advertisement

Leave a Reply