ಮೋಚಾ ಚಂಡಮಾರುತ: ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ

masthmagaa.com:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ʻಮೋಚಾʼ ಚಂಡಮಾರುತ ಇಂದು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದ್ರಿಂದಾಗಿ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಚಂಡಮಾರುತ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಅಂಡಮಾನ್-ನಿಕೋಬಾರ್ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಜೊತೆಗೆ ಈಶಾನ್ಯ ರಾಜ್ಯಗಳಲ್ಲೂ ಭಾರಿ ಮಳೆಯಾಗಲಿದೆ. ಹೀಗಾಗಿ ಈ ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ದೆ ಈ ಮೋಚಾ ಸೈಕ್ಲೋನ್‌ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನ ಮೇಲೂ ಪರಿಣಾಮ ಬೀರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

-masthmagaa.com

Contact Us for Advertisement

Leave a Reply