ಕುರುಕ್ಷೇತ್ರಕ್ಕೆ 50 ದಿನ..! ಡಿಬಾಸ್ ಹೇಳಿದ್ದೇನು ಗೊತ್ತಾ..?

ಡಿಬಾಸ್ ದಚ್ಚು ಅಭಿನಯದ ಕುರುಕ್ಷೇತ್ರ ಸಿನಿಮಾ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಈ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂತಸ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ, ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ, ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಮತ್ತು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು ಎಂದಿದ್ದಾರೆ. ಆಗಸ್ಟ್ 9ರಂದು ರಿಲೀಸ್ ಆಗಿದ್ದ ಕುರುಕ್ಷೇತ್ರ ಸಿನಿಮಾದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ ಸೇರಿದಂತೆ ದೊಡ್ಡ ತಾರಾಗಣವೇ ನಟಿಸಿತ್ತು.

Contact Us for Advertisement

Leave a Reply