ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ದಾಖಲೆಯ ಮಳೆ!

masthmagaa.com:

ಕಳೆದ ಎರಡು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗ್ತಿದೆ. ನಿನ್ನೆ ಬೆಂಗಳೂರಿನಲ್ಲಿ ರಾತ್ರಿ ಇಡೀ ಸುರಿದ ಧಾರಾಕಾರ ಮಳೆ ದಾಖಲೆ ಬರೆದಿದ್ದು, ನಗರದ ಯಲಹಂಕ ಪ್ರದೇಶವೊಂದರಲ್ಲೇ ದಾಖಲೆಯ 164 ಮಿ.ಮೀ ಮಳೆಯಾಗಿದೆ. ಬೆಂಗಳೂರಿನಲ್ಲಿ ರಾತ್ರಿ ಇಡೀ ಸುರಿದ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ವು. ಜೊತೆಗೆ ನಗರದ ಹಲವು ಪ್ರದೇಶಗಳಲ್ಲಿ ಹೆಚ್ಚು ಮಳೆ ದಾಖಲಾಗಿದ್ದು, ಈ ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇನ್ನು ಬೆಂಗಳೂರಿನ 29 ಕೇಂದ್ರಗಳಲ್ಲಿ 50ಮಿಮೀಗೂ ಅಧಿಕ ಮಳೆಯಾಗಿದ್ದು, 40 ಕೇಂದ್ರಗಳಲ್ಲಿ ಸಾಧಾರಣ ಮಳೆ ದಾಖಲಾಗಿದೆ.

-masthmagaa.com

Contact Us for Advertisement

Leave a Reply