ಕೇಂದ್ರದ ಸುಗ್ರೀವಾಜ್ಞೆ ಸುಟ್ಟು ಹಾಕಲು ಮುಂದಾದ ದಿಲ್ಲಿ ಸಿಎಂ!

masthmagaa.com:

ದೆಹಲಿ ಆಡಳಿತ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರೋ ಸುಗ್ರೀವಾಜ್ಞೆ ವಿರುದ್ಧ ದೆಹಲಿ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ. ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿ ಹೊರತುಪಡಿಸಿ ದೆಹಲಿಯಲ್ಲಿನ ಸೇವೆಗಳ ನಿಯಂತ್ರಣವನ್ನು ಚುನಾಯಿತ ಸರ್ಕಾರಕ್ಕೆ ಹಸ್ತಾಂತರಿಸಬೇಕು ಅಂತ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಆದ್ರೆ ತೀರ್ಪು ಬಂದ ಒಂದೇ ವಾರದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ IAS ಮತ್ತು DANICS ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಅಧಿಕಾರವನ್ನು ತೆಗೆದುಕೊಳ್ಳುವ ಸುಗ್ರೀವಾಜ್ಞೆಯನ್ನು ಕೇಂದ್ರ ಪ್ರಕಟಿಸಿತ್ತು. ಇದನ್ನ ವಿರೋಧಿಸುತ್ತಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಇದೀಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಇತ್ತ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯ ಪ್ರತಿಯನ್ನ ಕೇಜ್ರವಾಲ್‌ ಅವ್ರು ಜುಲೈ 3ರಂದು ಸುಟ್ಟು ಹಾಕಲಿದ್ದಾರೆ ಅಂತ ಅಮ್ ಆದ್ಮಿ ಪಕ್ಷ ತಿಳಿಸಿದೆ. ಜೊತೆಗೆ ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸುಗ್ರೀವಾಜ್ಞೆಯನ್ನು ಸುಟ್ಟು ಹಾಕುತ್ತೇವೆ ಅಂತ ಮುಖ್ಯ ವಕ್ತಾರ ಸೌರಭ್ ಭಾರಧ್ವಾಜ್ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply