ಸೋನಿಯಾ ಗಾಂಧಿ ಅಳಿಯನಿಗೆ ಶುರುವಾಯ್ತಾ ಇಡಿ ಸಂಕಷ್ಟ..?

ಚಿದಂಬರಂ, ಡಿಕೆಶಿ ಜೈಲು ಪಾಲಾಗಿ ಆಗಿದೆ. ಈಗ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ನೀಡಿರುವ ಜಾಮೀನನ್ನು ರದ್ದುಪಡಿಸುವಂತೆ ದೆಹಲಿ ಹೈಕೋರ್ಟ್‍ನಲ್ಲಿ ಇಡಿ ಮನವಿ ಮಾಡಿದೆ. ಇಂದು ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯದ ರಾಬರ್ಟ್ ವಾದ್ರಾ ಅವರನ್ನು ಅರೆಸ್ಟ್ ಮಾಡಲಾಗಿತ್ತಾ..? ಎಂದು ಪ್ರಶ್ನಿಸಿದೆ. ಈ ವೇಳೆ ಪ್ರತಿಕ್ರಿಯಿಸಿದ ಇಡಿ ಪರ ವಕೀಲರು, ನಾವು ವಿಚಾರಣೆ ನಡೆಸುತ್ತಿದ್ದಾಗಲೇ ಪಟಿಯಾಲ ಹೌಸ್ ಕೋರ್ಟ್ ವಾದ್ರಾಗೆ ಮಧ್ಯಂತರ ಜಾಮೀನು ನೀಡಿತ್ತು. ಆದ್ರೆ ಅದರ ನಂತರವೂ ರಾಬರ್ಟ್ ವಾದ್ರಾ ವಿಚಾರಣೆಗೆ ಹಾಜರಾಗುತ್ತಿಲ್ಲ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈವರೆಗೆ 12 ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ. ಜಾಮೀನು ರದ್ದುಗೊಳಿಸಿ ಎಂದು ಇಡಿ ಮನವಿ ಮಾಡಿದೆ. ಆದ್ರೆ ವಾದ್ರಾ ಪರ ವಕೀಲರು, ವಿಚಾರಣೆಗೆ ಹಾಜರಾಗಲು ಇನ್ನಷ್ಟು ದಿನ ಸಮಯ ನೀಡುವಂತೆ ಕೇಳಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ.

Contact Us for Advertisement

Leave a Reply