ಡಿಕೆಗೆ ಸಿಗಲಿಲ್ಲ ಜಾಮೀನು..ನಾಳೆಗೆ ವಿಚಾರಣೆ ಮುಂದೂಡಿಕೆ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲಾಗಿದೆ. ನಾಳೆ ಮಧ್ಯಾಹ್ನ 3.30ಕ್ಕೆ ಮತ್ತೆ ಅರ್ಜಿಯನ್ನು ಹೈಕೋರ್ಟ್​​​ ವಿಚಾರಣೆ ನಡೆಸಲಿದೆ. ಇಂದು ಡಿಕೆಶಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹ್ಟಗಿ ಮತ್ತು ದಯಾನ್ ಕೃಷ್ಣನ್ ವಾದ ಮಂಡಿಸಿದ್ರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ, ಅರ್ಜಿ ವಿಚಾರಣೆ ಮುಂದೂಡಿದೆ. ನಾಳೆ ಡಿಕೆಶಿ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಗುರುವಾರ ಮತ್ತು ಶುಕ್ರವಾರ ಇಡಿ ಪರ ವಕೀಲರು ವಾದ ಮಂಡಿಸಲಿದ್ದಾರೆ.

ಇನ್ನು ಡಿಕೆಶಿಗೆ ಜಾಮೀನು ನೀಡದಂತೆ ಇಡಿ ವಾದಿಸುವ ಸಾಧ್ಯತೆ ಇದೆ. ಮೊದಲಿಗೆ ಮೂರ್ನಾಲ್ಕು ದಿನ ಡಿಕೆಶಿ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ನಂತರ ವಶಕ್ಕೆ ಪಡೆದು 10 ದಿನ ವಿಚಾರಣೆ ನಡೆಸಿದ್ದರು. ಅಲ್ಲದೆ ತಿಹಾರ್ ಜೈಲಿನಲ್ಲೂ ಸಹ 2 ದಿನ ವಿಚಾರಣೆ ನಡೆಸಿದ್ದರು. ರೋಸ್ ಅವೆನ್ಯೂ ಕೋರ್ಟ್​​ ಡಿ.ಕೆ.ಶಿವಕುಮಾರ್​​ಗೆ ಜಾಮೀನು ನೀಡಲು ನಿರಾಕರಿಸಿತ್ತು. ಹೀಗಾಗಿ ಡಿ.ಕೆ.ಶಿವಕುಮಾರ್ ಜಾಮೀನಿಗಾಗಿ ಹೈಕೋರ್ಟ್​ ಮೊರೆ ಹೋಗಿದ್ದರು.

 

 

 

Contact Us for Advertisement

Leave a Reply