ದೆಹಲಿ: 45 ವರ್ಷದ ಬಳಿಕ ಪ್ರವಾಹ ಮಟ್ಟ ಮೀರಿ ಹರಿದ ಯಮುನಾ ನದಿ

masthmagaa.com:

ರಾಜ್ಯದ ಹಲವು ಕಡೆ ಸಾಧಾರಣ ಮಳೆಯಾಗಿದೆ. ಮುಂದಿನ 2 ದಿನ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗೋ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತ್ತ ಮಲೆನಾಡು ಸೇರಿದಂತೆ ದಾವಣಗೆರೆ ಮತ್ತು ಕೋಲಾರದಲ್ಲೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಆದ್ರೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗೋ ಸಾಧ್ಯತೆ ಕಡಿಮೆಯಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಇತ್ತ ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಕಾರಣದಿಂದ ಸಾವನ್ನಪ್ಪಿರೋರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಇನ್ನೊಂದ್‌ ಕಡೆ ದೆಹಲಿಯಲ್ಲಿ ಒಂದೇ ಸಮನೆ ಸುರಿದ ಮಳೆಯಿಂದಾಗಿ ಯಮುನಾ ನದಿ ಅಪಾಯಮಟ್ಟ ಮೀರಿ ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಉಂಟಾಗಿದೆ. ಸಾರ್ವಕಾಲಿಕ ಅಪಾಯ ಮಟ್ಟ 207.55 ಮೀಟರ್‌ ಮೀರಿದ್ದು, 45 ವರ್ಷಗಳ ಹಿಂದೆ ಯಮುನಾ ನದಿ 207.49 ಮೀಟರ್‌ಗೆ ತಲುಪಿತ್ತು. ಈ ಹಿನ್ನಲೆಯಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ತುರ್ತು ಸಭೆ ನಡೆಸಿದ್ದಾರೆ. ಈ ವೇಳೆ ಹರಿಯಾಣದ ಹತ್ನಿಕುಂಡ್‌ ಬ್ಯಾರೇಜ್‌ನಿಂದ ನೀರು ಬಿಡುಗಡೆ ಮಾಡದಂತೆ ಪತ್ರದ ಮೂಲಕ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವ್ರನ್ನ ಮನವಿ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply