ರಾಜ್ಯದಲ್ಲಿ ಇನ್ನು 5 ದಿನಗಳ ಕಾಲ ಮಳೆ: ಹವಾಮಾನ ಇಲಾಖೆ

masthmagaa.com:

ರಾಜ್ಯದಲ್ಲಿ ಇನ್ನು 5 ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ನಿನ್ನೆ ಸುರಿದ ಭಾರಿ ಮಳೆಗೆ ಬಳ್ಳಾರಿ ಜಿಲ್ಲೆಯಲ್ಲಿ ರೈತ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇತ್ತ ಕೊಪ್ಪಳದಲ್ಲಿ 16 ವರ್ಷದ ಬಾಲಕ ಸಿಡಿಲು ಬಡಿದು ಮೃಪಟ್ಟಿದ್ದಾನೆ. ಈ ಮೂಲಕ ರಾಜ್ಯದಲ್ಲಿ ನಿನ್ನೆ ಮಳೆಗೆ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಇನ್ನು ನಿನ್ನೆ ಕೆ ಆರ್‌ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಕಾರ್‌ ಸಿಲುಕಿ ಅದ್ರಲ್ಲಿದ್ದ ಓರ್ವ ಮಹಿಳೆ ಮೃತಪಟ್ಟಿದ್ರು. ಅದರ ಬೆನ್ನಲ್ಲೇ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಅಂಡರ್‌ಪಾಸ್‌ಗಳನ್ನ ಸರಿಯಾಗಿ ನಿರ್ವಹಣೆ ಮಾಡದೇ ಇರೋದ್ರಿಂದ, ವಾಹನ ಸಂಚಾರರ ಪ್ರಾಣಕ್ಕೆ ತೊಂದರೆಯಾಗಿದೆ ಅಂತ ಸಾರ್ವಜನಿಕರು ಆರೋಪಿಸ್ತಿದಾರೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಪ್ರಮುಖ 20 ಅಂಡರ್‌ಪಾಸ್‌ಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ನಿರ್ದೇಶನ ನೀಡಿದೆ. ಇತ್ತ ಬೆಂಗಳೂರಿನ ಅಂಡರ್‌ಪಾಸ್‌ ಸೇರಿದಂತೆ ರಾಜ್ಯದ ಎಲ್ಲ ಅಂಡರ್‌ಪಾಸ್‌ಗಳ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್‌ ಆದೇಶ ನೀಡಿದ್ದಾರೆ. ಇನ್ನೊಂದ್‌ ಕಡೆ ನಿನ್ನೆ ಮಳೆಯಿಂದ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಅಂತ ತಿಳಿದುಬಂದಿದೆ. ಇತ್ತ ಇತಿಹಾಸದಲ್ಲೇ ಮೊದಲ ಬಾರಿಗೆ ಕಬ್ಬನ್‌ ಪಾರ್ಕ್‌ನಲ್ಲಿ 50 ವರ್ಷಕ್ಕೂ ಹೆಚ್ಚು ಹಳೆಯ ಮರಗಳು ಧರೆಗುರುಳಿವೆ ಅಂತ ಪಾರ್ಕ್‌ನ ಅಧಿಕಾರಿಯೊಬ್ರು ಹೇಳಿದ್ದಾರೆ.

-masthmagaa.com

Contact Us for Advertisement

Leave a Reply