ಮೈತ್ರಿ ಬಗ್ಗೆ ಎಚ್‍ಡಿಡಿ, ಎಚ್‍ಡಿಕೆ ನಡುವೆ ಗೊಂದಲ..?

ಉಪಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಇನ್ನೆರಡು ದಿನಗಳಲ್ಲಿ ಸಭೆ ನಡೆಸಿ ನಿರ್ಧರಿಸುತ್ತೇವೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಕಳೆದ 3 ತಿಂಗಳಿಂದ ಸಭೆ ನಡೆಸುತ್ತಿದ್ದೇನೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಆದ್ರೆ ಹೆಚ್ಚಿನವರು ಈ ಬಾರಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಬೇಕು. ಈವರೆಗೆ ಮೈತ್ರಿ ಮಾಡಿಕೊಂಡು ಶಿಕ್ಷೆ ಅನುಭವಿಸಿದ್ದು ಸಾಕಾಗಿದೆ. ನಾವು ಸೋಲಲಿ ಅಥವಾ ಗೆಲ್ಲಲಿ ಸ್ಪರ್ಧೆ ಮಾಡಲೇಬೇಕು ಎಂದು ಹೇಳಿದ್ದಾರೆ. ಹೀಗಾಗಿ ಕಾರ್ಯಕರ್ತರ ಮಾತಿಗೆ ಬೆಲೆ ಕೊಟ್ಟು ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಚಿಂತಿಸುತ್ತಿದ್ದೇವೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಹಿರಿಯ ಮುಖಂಡರ ಸಭೆ ನಡೆಸುತ್ತೇನೆ. ಅದರಲ್ಲಿ ಚರ್ಚೆ ಮಾಡಿ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಮಾಡುತ್ತೇನೆ ಅಂದ್ರು. ಆದ್ರೆ ಮೈಸೂರಲ್ಲಿ ಮಾತನಾಡಿದ ಕುಮಾರಸ್ವಾಮಿ ಆಲ್ರೇಡಿ ಜೆಡಿಎಸ್ ಸ್ವತಂತ್ರವಾಗಿ ಸ್ಪಧಿಸುತ್ತೆ ಎಂದು ಘೋಷಿಸಿದ್ದಾರೆ. ಇದರಿಂದ ಮೈತ್ರಿ ವಿಚಾರವಾಗಿ ಎಚ್‍ಡಿಡಿ, ಎಚ್‍ಡಿಕೆ ನಡುವೆಯೇ ಗೊಂದಲವಿದೆಯಾ ಅನ್ನೋ ಅನುಮಾನ ಮೂಡಿದೆ.

ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಮಾತ್ರ, ಮೈತ್ರಿ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತೆ. ನಮ್ಮ ಅಭಿಪ್ರಾಯ ಕೇಳುತ್ತಾರೆ. ಆಗ ನಾವು ಹೇಳುತ್ತೇವೆ ಅಂದ್ರು.

Contact Us for Advertisement

Leave a Reply