ನಿಖಿಲ್ ಮದುವೆ ಟೀಕಿಸಿದವರಿಗೆ ಡಿಚ್ಚಿ ಕೊಟ್ಟ ಕುಮಾರಸ್ವಾಮಿ..!

-masthmagaa.com:
ಮಾಜಿ ಸಿಎಂ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಮದುವೆಯಲ್ಲಿ ಸಾಮಾಜಿಕ ಅಂತ ಕಾಯ್ದುಕೊಂಡಿಲ್ಲ ಅಂತ ಚರ್ಚೆಯಾಗಿತ್ತು. ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಿರುವ, ಮಾಜಿ ಸಿಎಂ ಕುಮಾರಸ್ವಾಮಿ ಟೀಕಾಕಾರರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದ್ರೆ, ಸಿಎಂ ಬಿ.ಎಸ್‌. ಯಡಿಯೂರಪ್ಪ ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ ಎಂದು ಹೊಗಳಿದ್ದಾರೆ. 
ಇದೇ ರೀತಿ ಮತ್ತೊಂದು ಟ್ವೀಟ್​​ನಲ್ಲಿ, ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ, ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಿದ್ದೇನೆ.. ಆದ್ರೆ ಇದರಲ್ಲೂ ರಾಜಕೀಯ ಹುಡುಕಿದ ಸಾಮಾಜಿಕ ಮಾಧ್ಯಮದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು. “ಮನದ ಕೋಪ ತನ್ನ ಅರಿವಿನ ಕೇಡು.. ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ,  ನೆರೆಮನೆಯ ಸುಡದು ಕೂಡಲಸಂಗಮದೇವಾ” ಎಂದು ಬರೆದುಕೊಂಡಿದ್ದಾರೆ.
-masthmagaa.com
Contact Us for Advertisement

Leave a Reply