masthmagaa.com:

ಹುಬ್ಬಳ್ಳಿ: ಮಾರಣಾಂತಿಕ ಕೊರೋನಾ ವೈರಸ್ ಹರಡುವುದನ್ನ ತಡೆಯಲು ಸರ್ಕಾರ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಪೈಕಿ ಧಾರವಾಡ ಜಿಲ್ಲಾಡಳಿತ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸ್ಥಳೀಯ ಯಂಗ್ ಇಂಡಿಯಾ ಹಾಗೂ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ ಸಹಯೋಗದಲ್ಲಿ ಸೋಂಕು ಕಳೆಯುವ ಸುರಂಗ ನಿರ್ಮಿಸಿದೆ. ರಾಜ್ಯದಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಇತ್ತೀಚೆಗಷ್ಟೇ ತಮಿಳುನಾಡಿನ ತಿರುಪ್ಪೂರ್​ನಲ್ಲಿ ಅಲ್ಲಿನ ಯಂಗ್ ಇಂಡಿಯಾ ಸಂಸ್ಥೆ ಇಂತಹ ಪ್ರಯತ್ನ ಮಾಡಿತ್ತು.

ಈ ಸುರಂಗದೊಳಗೆ ವ್ಯಕ್ತಿಗಳು ಬಂದಾಗ ಸೆನ್ಸಾರ್ ಮೂಲಕ ಕಾರ್ಯ ಆರಂಭವಾಗುತ್ತದೆ. ವ್ಯಕ್ತಿ ಧರಿಸಿದ ಬಟ್ಟೆ ಒದ್ದೆಯಾಗದ ರೀತಿ ಸೋಂಕು ನಿವಾರಕ ಸಿಂಪಡಣೆಯಾಗುತ್ತದೆ. ಇಂದು ಬೆಳಗ್ಗೆ ಸುರಂಗದ ರಚನೆ ಹಾಗೂ ನಿರ್ಮಾಣವನ್ನ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪರಿಶೀಲಿಸಿದ್ರು. ಬಳಿಕ ಮಾತನಾಡಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ರೈತರು, ವ್ಯಾಪಾರಸ್ಥರ ಆರೋಗ್ಯ ರಕ್ಷಣೆಗೆ ಇದು ಸಹಕಾರಿಯಾಗಲಿದೆ. ಇದು ಉತ್ತಮ ಬೆಳವಣಿಗೆ ಎಂದರು.

-masthmagaa.com

Contact Us for Advertisement

Leave a Reply