ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ! ಪ್ರಮಾಣವಚನ ಕಾರ್ಯಕ್ರಮ ಬಹಿಷ್ಕರಿಸಿದ ಶಾಸಕರು!

masthmagaa.com:

ಸಚಿವ ಸಂಪುಟ ವಿಸ್ತರಣೆ ಆಗ್ತಿದ್ದಂತೆ, ಪಕ್ಷದೊಳಗೆ ಅಸಮಾಧಾನ ಮನೆಮಾಡಿದೆ. ಸಚಿವ ಸ್ಥಾನದ ಆಕಾಂಕ್ಷಿತ ನಾಯಕರು ತಮ್ಮ ಆಕ್ರೋಶವನ್ನ ಹೊರ ಹಾಕ್ತಿದಾರೆ. ಈ ವೇಳೆ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ 5 ಶಾಸಕರು ಆಯ್ಕೆಯಾಗಿದ್ರೂ, ಒಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಹಿನ್ನೆಲೆ ಎಲ್ಲರೂ ಮುನಿಸಿಕೊಂಡು ಪ್ರಮಾಣವಚನ ಸಮಾರಂಭವನ್ನ ಬಹಿಷ್ಕರಿಸಿ ತಮ್ಮ ತಮ್ಮ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ. ಇನ್ನೊಂದ್‌ ಕಡೆ ಸಚಿವ ಸಂಪುಟದಲ್ಲಿ ಉಪ್ಪಾರ ಸಮುದಾಯದವನ್ನ ಕಡೆಗಣನೆ ಮಾಡಲಾಗಿದೆ ಅಂತ ಚಾಮರಾಜನಗರದಲ್ಲಿ ಆಕ್ರೋಶ ವ್ಯಕ್ತವಾಗ್ತಿದೆ. ಇತ್ತ ಶಾಸಕ ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಅವರ ಬೆಂಬಲಿಗರಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆದಿದೆ. ಇನ್ನು ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ್‌ ಸವದಿಗೆ ಮಂತ್ರಿಗಿರಿ ನೀಡಬೇಕು ಅಂತ 3 ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಅಲ್ದೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಪೋಸ್ಟ್ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಸವದಿ ಅಭಿಮಾನಿಗಳು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಸಚಿವ ಸ್ಥಾನ ಕೈತಪ್ಪಿದ್ರಿಂದ ಕೆಲ ಸಚಿವರು ಅಸಮಾಧಾನಗೊಂಡಿದ್ದಾರೆ ಅಂತ ಡಿಸಿಎಂ ಡಿಕೆ ಶಿವಕುಮಾರ್‌ಗೆ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ ಡಿಕೆಶಿ, ನಾನೇನು ಮಾಡೋಕೆ ಸಾಧ್ಯ ಎಂದಿದ್ದಾರೆ. ನಾನೂ ಕೂಡ ಸಾಕಷ್ಟು ಬಾರಿ ಅವಕಾಶದಿಂದ ವಂಚಿತನಾಗಿದ್ದೆ. ಧರಂಸಿಂಗ್, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನನಗೂ ಅವಕಾಶ ಸಿಕ್ಕಿರಲಿಲ್ಲ. ಆದರೆ, ನಾನು ತಾಳ್ಮೆಯಿಂದ ಕಾದಿದ್ದೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply