ಡಿಕೆಶಿಗೆ ಇವತ್ತೂ ಸಿಗಲಿಲ್ಲ ಜಾಮೀನು..! ಸೆ.25 ತೀರ್ಪು..

ಅಕ್ರಮ ಹಣ ವರ್ಗಾವಣೆ ಕೇಸ್‍ನಲ್ಲಿ ಜೈಲು ಪಾಲಾಗಿರುವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಸಂಬಂಧ ಸೆಪ್ಟೆಂಬರ್ 25ರಂದು ತೀರ್ಪು ಹೊರಬೀಳಲಿದೆ. ಇಂದು ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ವಾದ-ಪ್ರತಿವಾದ ಆಲಿಸಿತು. ಡಿಕೆಶಿ ಪರ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದ್ರೆ, ಇಡಿ ಪರ ನಟರಾಜ್ ವಾದ ಮಂಡಿಸಿದ್ರು. ಭೋಜನ ವಿರಾಮದ ಬಳಿಕ ಜಡ್ಜ್ ಅಜಯ್ ಕುಮಾರ್ ಕುಹರ್ ಅವರು, ಸೆಪ್ಟೆಂಬರ್ 25ರಂದು ಮಧ್ಯಾಹ್ನ 3.30ಕ್ಕೆ ತೀರ್ಪು ಪ್ರಕಟಿಸೋದಾಗಿ ತಿಳಿಸಿದರು. ಸದ್ಯ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್ ಇನ್ನೂ 5 ದಿನಗಳ ಕಾಲ ಜೈಲಿನಲ್ಲೇ ಕಾಲ ಕಳೆಯಬೇಕಿದೆ. ಈಗಾಗಲೇ ಡಿ.ಕೆ.ಶಿವಕುಮಾರ್ ಅವರ ಇಡಿ ಕಸ್ಟಡಿ ಅವಧಿ ಮುಗಿದ ಬಳಿಕ ಅಕ್ಟೋಬರ್ 1ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Contact Us for Advertisement

Leave a Reply