ಡಿಕೆಶಿಗೆ ಜಾಮೀನು ಕೊಡುತ್ತಾ ದೆಹಲಿ ಹೈಕೋರ್ಟ್..?

ಇಡಿ ಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಇಂದು ದೆಹಲಿ ಹೈಕೋರ್ಟ್‍ನಲ್ಲಿ ನಡೆಯಲಿದೆ. ನ್ಯಾ.ಸುರೇಶ್ ಕುಮಾರ್ ನೇತೃತ್ವದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತು ನ್ಯಾಯಾಂಗ ಬಂಧನದಡಿ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಡಿ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಜಾ ಮಾಡಿತ್ತು. ಹೀಗಾಗಿ ಮಾಜಿ ಮಂತ್ರಿ ಡಿಕೆಶಿ ತಿಹಾರ್ ಜೈಲಿನಲ್ಲೇ ಸೆರೆಮನೆವಾಸ ಅನುಭವಿಸುತ್ತಿದ್ದಾರೆ. ಇಡಿ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದಕ್ಕೆ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ ಸುರೇಶ್ ಜಾಮೀನು ಪಡೆಯುವ ಬಗ್ಗೆ ಕಾನೂನು ಹೋರಾಟ ಮುಂದುವರಿಸಿದ್ದಾರೆ. ಇನ್ನು ನಾಳೆಗೆ ಡಿಕೆಶಿ ನ್ಯಾಯಾಂಗ ಬಂಧನದ ಅವಧಿಯೂ ಮುಗಿಯಲಿದ್ದು, ರೋಸ್ ಅವೆನ್ಯೂ ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.

Contact Us for Advertisement

Leave a Reply