ಜಾಮೀನು ಪಡೆಯಲು ಡಿಕೆಶಿ ಮಾಡ್ತಿರೋದು ಏನು..?

ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಡಿ.ಕೆ.ಶಿವಕುಮಾರ್‍ಗೆ ಜಾಮೀನು ಅರ್ಜಿ ನಿರಾಕರಿಸಿದೆ. ಹೀಗಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇವತ್ತು ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ರೋಸ್ ಅವೆನ್ಯೂ ಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಇಡಿ ಕೋರ್ಟ್‍ನಲ್ಲಿ ತೀರ್ಪು ಬರುತ್ತಿದ್ದಂತೆ ವಕೀಲರೊಂದಿಗೆ ಚರ್ಚಿಸಿದ ಡಿಕೆಶಿ ಸಹೋದರ ಡಿ.ಕೆ.ಸುರೇಶ್, ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಜಾಮೀನು ನಿರಾಕರಿಸಿರುವ ಆದೇಶದ ಪ್ರತಿ ಪಡೆದಿರುವ ಡಿಕೆಶಿ ಪರ ವಕೀಲರು, ಹೈಕೋರ್ಟಿಗೆ ಮೆಲ್ಮನವಿ ಸಲ್ಲಿಸುವುದಕ್ಕೆ ಡ್ರಾಫ್ಟ್ ರೆಡಿಮಾಡಿಕೊಳ್ಳಲಿದ್ದಾರೆ. ಇಂದು ಸಂಜೆ ಅಥವಾ ನಾಳೆ ಹೈಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಡಿಕೆಶಿಗೆ ಅಕ್ಟೋಬರ್ 1ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Contact Us for Advertisement

Leave a Reply