ಸಂತೋಷ್​ ಸೂಸೈಡ್​ ಲೆಟರ್​ನಲ್ಲಿ ನಿಜವಾಗಲೂ ಏನಿದೆ ಗೊತ್ತಾ?

masthmagaa.com:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ 40 ಪರ್ಸೆಂಟ್​​ ಕಮಿಷನ್‌ ಆರೋಪ ಮಾಡಿ ಪ್ರಧಾನಿ ಮೋದಿಗೆ ಪತ್ರ ಬರೆದು ಸುದ್ದಿಯಾಗಿದ್ದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅವರು ಬರೆದಿರೋ ಆತ್ಮಹತ್ಯೆ ಪತ್ರದಲ್ಲಿ, ‘ನನ್ನ ಸಾವಿಗೆ ನೇರ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ. ಸರ್ಕಾರದಿಂದ ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಮತ್ತು ಯಡಿಯೂರಪ್ಪನವರು ಸಹಾಯ ಮಾಡ್ಬೇಕು ಅಂತ ಕೈ ಮುಗಿದು ಕೇಳಿಕೊಳ್ತೀನಿ. ಮಾಧ್ಯಮ ಮಿತ್ರರಿಗೂ ಕೋಟಿ ಕೋಟಿ ಧನ್ಯವಾದ. ಪ್ರವಾಸ ಹೋಗೋಣ ಅಂತ ಗೆಳಯರಾದ ಸಂತೋಷ್ ಮತ್ತು ಪ್ರಶಾಂತ್‍ರನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ’ ಅಂತ ಇದೆ.

-masthmagaa.com

Contact Us for Advertisement

Leave a Reply