BIG NEWS: ಮಾಜಿ ಪ್ರಧಾನಿ ಮನಹಮೋಹನ್ ಸಿಂಗ್ ಏಮ್ಸ್​ ಆಸ್ಪತ್ರೆಗೆ ದಾಖಲು

masthmagaa.com:

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ತುರ್ತಾಗಿ ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನಮೋಹನ್ ಸಿಂಗ್ ಅವರಿಗೆ ಉಸಿರಾಟದ ಸಮಸ್ಯೆ ಹಾಗೂ ಎದೆನೋವು ಕಾಣಿಸಿಕೊಂಡಿತ್ತು. 87 ವರ್ಷದ ಮನಮೋಹನ್ ಸಿಂಗ್ ಅವರಿಗೆ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯ ಕಾರ್ಡಿಯೊ ಥೆರಾಪಿಕ್ ವಿಭಾಗದಲ್ಲಿ ಅಡ್ಮಿಟ್ ಮಾಡಲಾಗಿದೆ.

ಕಾರ್ಡಿಯಾಲಜಿಯ ಸೀನಿಯರ್ ಡಾಕ್ಟರ್ ನಿತೀಶ್ ನಾಯಕ್ ನೇತೃತ್ವದ ತಜ್ಞ ವೈದ್ಯರ ತಂಡ ಮನಮೋಹನ್ ಸಿಂಗ್ ಅವರಿಗೆ ಚಿಕಿತ್ಸೆ ನೀಡುತ್ತಿದೆ.

ಮನಮೋಹನ್ ಸಿಂಗ್ ಕಾಂಗ್ರೆಸ್‌ನ ಹಿರಿಯ ನಾಯಕರು. ಸದ್ಯ ರಾಜ್ಯಸಭೆಯಲ್ಲಿ ರಾಜಸ್ಥಾನ ಪ್ರತಿನಿಧಿಸುತ್ತಿದ್ದಾರೆ. ಜೊತೆಗೆ ಇವರು 2004 ರಿಂದ 2014ರ ಅವಧಿಯಲ್ಲಿ ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.

-masthmagaa.com

Contact Us for Advertisement

Leave a Reply