ಡಿಕೆಶಿ ತಾಯಿಗೂ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್​​..!

ದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಈಗ ತಾಯಿ ಗೌರಮ್ಮ ಅವರಿಗೂ ಇಡಿ ನೋಟಿಸ್ ಕೊಟ್ಟಿದೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಸಂಸದ ಡಿ.ಕೆ.ಸುರೇಶ್​​ , ನನ್ನ ತಾಯಿ ಗೌರಮ್ಮ ಅವರಿಗೂ ನಾಳೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ಕೊಟ್ಟಿದೆ. ಅವರು ವಿಚಾರಣೆಗೆ ಹಾಜರಾಗುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಈ ಬಗ್ಗೆ ನಮ್ಮ ವಕೀಲರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇನೆ ಅಂದ್ರು.

ಇನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಈಗಾಗಲೇ ಡಿಕೆಶಿ ಆಪ್ತರು ಮತ್ತು ಸಂಬಂಧಿಕರನ್ನು ಇಡಿ ವಿಚಾರಣೆ ನಡೆಸುತ್ತಿದೆ. ಡಿಕೆಶಿ ಆಪ್ತರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಲಕ್ಷ್ಮೀಗೆ ಲೋನ್ ನೀಡಿದ ವಿಚಾರವಾಗಿ ಕೆ.ಎನ್. ರಾಜಣ್ಣ ಅವರನ್ನು ವಿಚಾರಣೆ ನಡೆಸಲಾಗಿತ್ತು. ಜೊತೆಗೆ ಡಿಕೆಶಿ ಪುತ್ರಿ ಐಶ್ವರ್ಯ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು. ಇದೀಗ ಗೌರಮ್ಮ ಅವರಿಗೂ ವಿಚಾರಣೆಗೆ ಹಾಜರಾಗುವಂತೆ  ನೋಟಿಸ್ ನೀಡಲಾಗಿದೆ.

Contact Us for Advertisement

Leave a Reply