ಹಾಸನ: ಮದ್ಯಪಾನ ಚಾಲೆಂಜ್‌ ಕಟ್ಟಿ ಪ್ರಾಣ ಕಳೆದುಕೊಂಡ ವ್ಯಕ್ತಿ

masthmagaa.com:

ಅರ್ಧ ಗಂಟೆಯಲ್ಲಿ 90 ಎಂಲ್‌ನ 10 ಪ್ಯಾಕೆಟ್ ಮದ್ಯ ಕುಡಿಯುವ ಚಾಲೆಂಜ್‌ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕು ಸಿಗರನಹಳ್ಳಿ ಗ್ರಾಮದ ತಿಮ್ಮೇಗೌಡ ಮೃತ ವ್ಯಕ್ತಿ. ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜು ಹಾಗೂ ತಿಮ್ಮೇಗೌಡ ಅನ್ನೋರ ನಡುವೆ ಮೂವತ್ತು ನಿಮಿಷದಲ್ಲಿ 90 ಎಂಲ್‌ನ ಹತ್ತು ಪ್ಯಾಕೆಟ್ ಮದ್ಯ ಕುಡಿಯುವ ಬೆಟ್ಸ್‌ ಕಟ್ಟಿದ್ದರು. ಇಬ್ಬರಿಗೂ ಕೃಷ್ಣೇಗೌಡ ಅನ್ನೋರು ಮದ್ಯದ ಪ್ಯಾಕೆಟ್‌ಗಳನ್ನು ನೀಡಿದ್ದ ಅಂತ ಆರೋಪಿಸಲಾಗಿದೆ. ಈ ಚಾಲೆಂಜ್‌ನಿಂದಾಗಿ ಮದ್ಯ ಸೇವಿಸಿದ್ದ ತಿಮ್ಮೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದು, ದೇವರಾಜು ಮತ್ತು ಕೃಷ್ಣೇಗೌಡ ಪರಾರಿಯಾಗಿದ್ದಾರೆ. ಈ ಇಬ್ಬರು ಆರೋಪಿಗಳ ವಿರುದ್ಧ ಕೇಸ್‌ ದಾಖಲಿಸಿಕೊಳ್ಳಲಾಗಿದೆ ಅಂತ ಪೊಲೀಸರು ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply