ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಈಗಿರೋ ಮುಸ್ಲಿಮರು ಮೊದಲು ಹಿಂದೂಗಳಾಗಿದ್ದರು: ಗುಲಾಂ ನಬಿ ಅಜಾದ್‌

masthmagaa.com:

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು ಹಾಗೂ ಈಗಿರೋ ಮುಸ್ಲಿಮರು ಮೊದಲು ಹಿಂದೂಗಳಾಗಿದ್ದರು ಅಂತ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಈ ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಜಮ್ಮ-ಕಾಶ್ಮೀರದ ದೋಡಾ ಜಿಲ್ಲೆಯ ಥಾತ್ರಿಯಲ್ಲಿ ಸಭೆಯೊಂದನ್ನ ಉದ್ದೇಶಿಸಿ ಮಾತಾಡುವಾಗ ನಬಿ ಅವ್ರು ಈ ರೀತಿ ಹೇಳಿಕೆ ನೀಡಿದ್ದು, ಅದ್ರ ವಿಡಿಯೋ ಈಗ ವೈರಲ್‌ ಆಗಿದೆ. ಹಿಂದೂ ಧರ್ಮ ಅತ್ಯಂತ ಪುರಾತನ ಧರ್ಮ. ಕೇವಲ 10-20 ಮುಸ್ಲಿಮರು ಮೊಘಲ್ ಸೈನ್ಯದ ಭಾಗವಾಗಿ ಭಾರತಕ್ಕೆ ಬಂದರು, ಇನ್ನು ಉಳಿದವರೆಲ್ಲ ಮತಾಂತರಗೊಂಡವರೇ ಆಗಿದ್ದಾರೆ ಅಂತ ಹೇಳಿದ್ದಾರೆ. ಜೊತೆಗೆ 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಮುಸಲ್ಮಾನನೂ ಇರಲಿಲ್ಲ, ಹೆಚ್ಚಿನ ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡಿದ್ದಾರೆ. ಎಲ್ಲರೂ ಹಿಂದೂ ಧರ್ಮದಲ್ಲಿ ಜನಿಸಿದ್ದು, ನಾವೆಲ್ಲರೂ ಒಟ್ಟಾಗಿ ಹಿಂದೂ, ಮುಸ್ಲಿಂ, ರಜಪೂತ, ದಲಿತ, ಕಾಶ್ಮೀರಿ, ಗುಜ್ಜರ್, ಎಲ್ಲರೂ ಒಗ್ಗೂಡಿ ಇದನ್ನು ನಮ್ಮ ಮನೆಯಾಗಿ ಮಾಡಿಕೊಳ್ಳಬೇಕು. ಅಲ್ದೆ ಇದು ನಮ್ಮ ಮನೆ, ಯಾರೂ ಹೊರಗಿನಿಂದ ಬಂದಿಲ್ಲ. ನಾವೆಲ್ಲರೂ ಈ ಮಣ್ಣಿನಲ್ಲಿ ಹುಟ್ಟಿದ್ದೇವೆ ಮತ್ತು ಇಲ್ಲಿಯೇ ಸಾಯುತ್ತೇವೆ ಅಂತ ಗುಲಾಂ ನಬಿ ಆಜಾದ್‌ ಹೇಳಿದ್ದಾರೆ. ಇನ್ನು ಭಾರತದಲ್ಲಿ, ಹಾಗೂ ಜಗತ್ತಿನಲ್ಲಿ ಇಸ್ಲಾಂ ಧರ್ಮ 1,500 ವರ್ಷಗಳ ಹಿಂದೆ ಬಂದಿದ್ದು, ಹಿಂದೂ ಧರ್ಮ ತುಂಬಾ ಪುರಾತನವಾದುದು ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply