ಕೊರೋನಾ ಭೀತಿ: 7, 8 ಮತ್ತು 9ನೇ ತರಗತಿಯ ಪರೀಕ್ಷೆಗಳು ಮುಂದೂಡಿಕೆ

masthmagaa.com:

ರಾಜ್ಯದಲ್ಲಿ ಕೊರೋನಾ ಭೀತಿ ಹೆಚ್ಚಾಗಿರುವ ನಡುವೆ ಮುಂಜಾಗ್ರತಾ ಕ್ರಮವಾಗಿ 7, 8 ಹಾಗೂ 9ನೇ ತರಗತಿಯ ಪರೀಕ್ಷೆಗಳನ್ನು ಮಾರ್ಚ್​ 31ರವರೆಗೆ ಮುಂದೂಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಪರಿಸ್ಥಿತಿ ಅವಲೋಕಿಸಿ ಪರೀಕ್ಷೆಯ ಮುಂದಿನ ದಿನಾಂಕ ಘೋಷಣೆ ಮಾಡಲಾಗುವುದು ಅಂತಾನೂ ಹೇಳಿದ್ದಾರೆ.

ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿತ್ತು. 6ನೇ ತರಗತಿವರೆಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಬೇಕಿಲ್ಲ. ಆದ್ರೆ ಉಳಿದ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮಾತ್ರ ಹಾಜರಾಗಬೇಕು ಅಂತ ಆದೇಶಿಸಲಾಗಿತ್ತು. ಆದ್ರೀಗ 7, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಯನ್ನೂ ಕೂಡ ಮುಂದೂಡಲಾಗಿದೆ. ಸದ್ಯದ ಆದೇಶದ ಪ್ರಕಾರ 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಯಥಾಸ್ಥಿತಿಯಂತೆ ನಡೆಯಲಿವೆ.

-masthmagaa.com

Contact Us for Advertisement

Leave a Reply