ಒಂದೇ ವೇದಿಕೆಯಲ್ಲಿ PM ಮೋದಿ ಹಾಗೂ I.N.D.I.A ನಾಯಕ ಶರದ್‌ ಪವಾರ್‌!

masthmagaa.com:

ಮಹಾರಾಷ್ಟ್ರದ ಪುಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನ ನೀಡಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಮೋದಿ, ಇದು ನನಗೆ ಸ್ಮರಣೀಯ ಕ್ಷಣವಾಗಿದ್ದು, ಭಾರತದ ಸ್ವಾತಂತ್ರ್ಯದಲ್ಲಿ ಲೋಕಮಾನ್ಯ ತಿಲಕರ ಪಾತ್ರ ಹಾಗೂ ಅವರ ಕೊಡುಗೆಯನ್ನ ಕೇವಲ ಪದಗಳಲ್ಲಿ ಹೇಳೋಕೆ ಸಾಧ್ಯವಿಲ್ಲ. ನಾನು ಈ ಪ್ರಶಸ್ತಿಯ ಹಣವನ್ನ ನಮಾಮಿ ಗಂಗೆ ಯೋಜನೆಗೆ ನೀಡಲು ನಿರ್ಧರಿಸಿದ್ದೇನೆ. ಈ ಪ್ರಶಸ್ತಿಯನ್ನು ನನ್ನ ದೇಶದ 140 ಕೋಟಿ ಜನರಿಗೆ ಅರ್ಪಿಸಲು ಬಯಸುತ್ತೇನೆ ಅಂತ ಹೇಳಿದ್ದಾರೆ. ಇನ್ನು ಪ್ರಶಸ್ತಿ ಸಮಾರಂಭದ ವೇದಿಕೆಯಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕ NCP ಮುಖ್ಯಸ್ಥ ಶರದ್‌ ಪವಾರ್‌ ಕೂಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಈ ವೇಳೆ ಮೋದಿ ಹಾಗೂ ಶರದ್‌ ಪವಾರ್‌ ನಡುವೆ ವೇದಿಕೆಯ ಮೇಲೆಯೇ ಚುಟುಕು ಚರ್ಚೆ ನಡೆದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿವಸೇನಾ ಸಂಸದ ಸಂಜಯ್‌ ರಾವುತ್‌, ಇಂಡಿಯಾ ಮೈತ್ರಿಕೂಟದ ನಾಯಕರು ಇಂತಹ ಕಾರ್ಯಕ್ರಮಗಳಿಗೆ ಹೋದಾಗ, ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಹೀಗಾಗಿ ಒಕ್ಕೂಟದ ಸದಸ್ಯರು ಈ ಗೊಂದಲವನ್ನ ನಿವಾರಿಸಬೇಕು ಅಂತ ಆಗ್ರಹ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply