ಸರ್ಕಾರದ ವಿರುದ್ಧ ಮಾತಾಡಿದ್ರೆ ದೇಶದ್ರೋಹವಲ್ಲ: ಸುಪ್ರೀಂಕೋರ್ಟ್​​

masthmagaa.com:

ದೆಹಲಿ: ಸರ್ಕಾರದ ನಿಲುವಿಗೆ ವಿರುದ್ಧವಾಗಿ ಮಾತನಾಡೋದು ದೇಶದ್ರೋಹವೆಂದು ಪರಿಗಣಿಸಲು ಸಾಧ್ಯವಿಲ್ಲ ಅಂತ ಸುಪ್ರೀಂಕೋರ್ಟ್​ ಹೇಳಿದೆ. ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ಕಾಯ್ದೆಯನ್ನು ರದ್ದುಪಡಿಸಿತ್ತು. ಇದಕ್ಕೆ ಜಮ್ಮು ಕಾಶ್ಮೀರ ಮಾಜಿ ಸಿಎಂ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ ಭಾರಿ ವಿರೋಧ ವ್ಯಕ್ತಪಡಿಸಿದ್ರು.

ಅದ್ರ ಬೆನ್ನಲ್ಲೇ ಫಾರೂಖ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ವಾಪಸ್​​ಗಾಗಿ ಚೀನಾ ಮತ್ತು ಪಾಕಿಸ್ತಾನದಿಂದ ನೆರವು ಕೇಳಿದ್ದಾರೆ ಅಂತ ಸುಪ್ರೀಂಕೋರ್ಟ್​​ಗೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ರು. ಆದ್ರೆ ತಮ್ಮ ಆರೋಪವನ್ನು ಸಾಬೀತುಪಡಿಸುವಲ್ಲಿ ಅವರು ವಿಫಲರಾಗಿದ್ದರಿಂದ ಅರ್ಜಿಯನ್ನು ತಿರಸ್ಕರಿಸಿರುವ ಕೋರ್ಟ್​​, 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಜೊತೆಗೆ ಸರ್ಕಾರದ ವಿರುದ್ಧ ಮಾತಾಡಿದ್ರೆ ದೇಶದ್ರೋಹ ಆಗಲ್ಲ ಅಂತಲೂ ಅಭಿಪ್ರಾಯಪಟ್ಟಿದೆ.

-masthmagaa.com

Contact Us for Advertisement

Leave a Reply