ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಅಂತೇಳಿ ಸರ್ಕಾರಿ ಅಧಿಕಾರಿಗಳಿಗೆ ಟೋಪಿ!

masthmagaa.com:

ಸಿನಿಮಾದಿಂದ ಇನ್ಸ್‌ಪಾಯರ್‌ ಆಗಿ ಇಲ್ಲೊಬ್ಬ ತಾನು ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಅಂತ ಹೇಳ್ಕೊಂಡು ಸರ್ಕಾರಿ ಅಧಿಕಾರಿಗಳಿಗೆ ಟೋಪಿ ಹಾಕಿದ್ದಾನೆ. ಆಂಧ್ರಪ್ರದೇಶ ಮೂಲದ ಆರೋಪಿ ಶ್ರೀನಿವಾಸ್‌ ರೆಡ್ಡಿ ಹೀಗೆ ಸುಳ್ಳು ಹೇಳಿ ಅದೆಷ್ಟೋ ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ್ದಾನೆ. ಈತ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ್ದಾನೆ. ಹೀಗಂತ ಬೆಂಗಳೂರಿನ ಪೊಲೀಸ್‌ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ. ಇನ್ನು ಮೋಸ ಹೋಗಿರೋ ಬಗ್ಗೆ ಸರ್ಕಾರಿ ಅಧಿಕಾರಿ ರಾಮದಾಸ್‌ ಅನ್ನೋರು ಬೆಂಗಳೂರು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಈ ಆರೋಪಿಯನ್ನ ಸಿಸಿಬಿ ಅಧಿಕಾರಿಗಳು ಅರೆಸ್ಟ್‌ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply