ಶಕ್ತಿ ಯೋಜನೆ ವಿರೋಧಿಸಿ ನಾಳೆ ಬೆಂಗಳೂರು ಬಂದ್‌ಗೆ ಕರೆ ಕೊಟ್ಟ ಖಾಸಗಿ ಸಾರಿಗೆ ಸಂಘ!

masthmagaa.com:

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ಆಗಿರುವ ನಷ್ಟಕ್ಕೆ ಪರಿಹಾರ ಸೇರಿದಂತೆ, ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ನಾಳೆ ಬೆಂಗಳೂರು ಬಂದ್‌ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್‌ ಮಾಡ್ತಿರೋದಾಗಿ ಹೇಳಿದೆ. ಈ ಕಾರಣಕ್ಕೆ ಸೋಮವಾರ ಅಂದ್ರೆ ನಾಳೆ ಬೆಂಗಳೂರಿನಲ್ಲಿ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ. ಈ ಬಂದ್‌ನಲ್ಲಿ ಖಾಸಗಿ ಬಸ್‌, ಆಟೋ, ಕ್ಯಾಬ್‌ಗಳ 32ಕ್ಕೂ ಹೆಚ್ಚಿನ ಸಂಘಟನೆಗಳು ಪಾಲ್ಗೊಳ್ಳುತ್ತಿದ್ದು, 7ಲಕ್ಷಕ್ಕೂ ಅಧಿಕ ವಾಹನಗಳ ಸೇವೆ ಸ್ಥಗಿತಗೊಳಿಸಲಿವೆ.

-masthmagaa.com

Contact Us for Advertisement

Leave a Reply