ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್​ಐಆರ್ ದಾಖಲು..!

masthmagaa.com:

ದಾವಣಗೆರೆ: ಕೊರೋನಾ ಹರಡುತ್ತಿರುವವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ತಬ್ಲಿಘಿ ಜಮಾತ್​​​​​ ಕಾರ್ಯಕ್ರಮದ ಬಗ್ಗೆ ಮಾತನಾಡಿದ್ದ ಶಾಸಕ ರೇಣುಕಾಚಾರ್ಯ, ಕೊರೋನಾ ಹರಡುತ್ತಿರುವವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಕಾಂಗ್ರೆಸ್ ಮುಖಂಡ ಸುಭಾಶ್ ಚಂದ್ರ ದೂರು ನೀಡಿದ್ದರು. ಈಗ ದಾವಣಗೆರೆಯ ಕೆಟಿಜೆ ನಗರ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಸಿದ್ದರಾಮಯ್ಯ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದರು.

-masthmagaa.com

 

Contact Us for Advertisement

Leave a Reply